ವಿಶ್ವವಿಖ್ಯಾತ ಮೈಸೂರು ದಸರಾ ವಿಜಯದಶಮಿ ಜಂಬೂಸವಾರಿಯಲ್ಲಿ ಈ ಬಾರಿ ಕನ್ನಡ ಚಿತ್ರರಂಗದ 30ಕ್ಕೂ ಹೆಚ್ಚು ಪ್ರಮುಖ ನಟ-ನಟಿಯರು ಭಾಗವಹಿಸಲಿದ್ದಾರೆ. ಡಾ. ಶಿವರಾಜ್‌ಕುಮಾರ್, ಯಶ್, ಕಿಚ್ಚ ಸುದೀಪ್, ರಿಷಬ್ ಶೆಟ್ಟಿ, ರಕ್ಷಿತ್ ಶೆಟ್ಟಿ, ರವಿಚಂದ್ರನ್, ರಚಿತಾ ರಾಮ್, ಸಪ್ತಮಿ ಗೌಡ, ರುಕ್ಮಿಣಿ ವಸಂತ್ ಸೇರಿದಂತೆ ಹಲವು ತಾರೆಯರಿಗೆ ಆಹ್ವಾನ ನೀಡಲಾಗಿದೆ.
ಕಲಾವಿದರಿಗಾಗಿ ವಿಶೇಷ ‘ಅಂಬಾರಿ ಬಸ್’ ವ್ಯವಸ್ಥೆ ಮಾಡಲಾಗಿದ್ದು, ಅದರಲ್ಲಿ ಕುಳಿತು ತಾರೆಯರು ಅಭಿಮಾನಿಗಳು ಹಾಗೂ ಸಾರ್ವಜನಿಕರಿಗೆ ಕೈಬೀಸುತ್ತಾ ಮೆರವಣಿಗೆಯಲ್ಲಿ ಸಾಗಲಿದ್ದಾರೆ. ಇದರೊಂದಿಗೆ ಕನ್ನಡ ಚಿತ್ರರಂಗದ 93 ವರ್ಷಗಳ ಇತಿಹಾಸವನ್ನು ಪರಿಚಯಿಸುವ ವಿಶೇಷ ಸ್ತಬ್ಧಚಿತ್ರವೂ ಜಂಬೂಸವಾರಿಯ ಪ್ರಮುಖ ಆಕರ್ಷಣೆಯಾಗಲಿದೆ.
ಡಾ. ರಾಜ್‌ಕುಮಾರ್, ಡಾ. ವಿಷ್ಣುವರ್ಧನ್, ಅಂಬರೀಶ್ ಹಾಗೂ ಪುನೀತ್ ರಾಜ್‌ಕುಮಾರ್ ಅವರ ಕೊಡುಗೆಗಳನ್ನು ಸ್ಮರಿಸುವ ರೀತಿಯಲ್ಲಿ ಸ್ತಬ್ಧಚಿತ್ರವನ್ನು ರೂಪಿಸಲಾಗುತ್ತಿದೆ. ಜನದಟ್ಟಣೆ ಹಾಗೂ ಸುರಕ್ಷತೆಯ ದೃಷ್ಟಿಯಿಂದ ತಾರೆಯರ ಬಸ್ ಸಂಚಾರವನ್ನು ಅರಮನೆ ಆವರಣದಿಂದ ಕೆ.ಆರ್. ವೃತ್ತದವರೆಗೆ ಮಾತ್ರ ಸೀಮಿತಗೊಳಿಸಲಾಗಿದೆ. ನಂತರ ಸಾಂಪ್ರದಾಯಿಕ ಜಂಬೂಸವಾರಿ ಮೆರವಣಿಗೆ ಬನ್ನಿಮಂಟಪದತ್ತ ಸಾಗಲಿದೆ.










