ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹಾಗೂ ನನ್ನ ನಡುವೆ ದೊಡ್ಡ ಮುನಿಸೂ ಇಲ್ಲ, ಸಣ್ಣ ಮುನಿಸೂ ಇಲ್ಲ. ಕೆಲವರು ನಮ್ಮ ನಡುವೆ ಮುನಿಸು ಇದೆ ಎಂಬ ವಾತಾವರಣ ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಸಿಎಂ ಡಿ.ಕೆ ಶಿವಕುಮಾರ್ (D.K Shivakumar) ಹೇಳಿದರು.
ಮೇಖ್ರಿ ವೃತ್ತ ಹಾಗೂ ಟೌನ್ ಹಾಲ್ ಬಳಿ ಮಾಧ್ಯಮಗಳೊಂದಿಗೆ ಅವರು ಮಾತನಾಡಿದರು. ಈ ವೇಳೆ, ಸಿದ್ದರಾಮಯ್ಯ ಅವರಿಗೂ ನಿಮಗೂ ಮುನಿಸು ಉಂಟಾಗಿದೆಯೇ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿ, ರಾಜಕಾರಣದಲ್ಲಿ ನಿಂದಕರು ಇರಬೇಕು, ವಿರೋಧಿಗಳು ಇರಬೇಕು. ಅವರೆಲ್ಲ ಇದ್ದಾಗಲೇ ನಮ್ಮಂತಹವರು ಶುದ್ಧ ರಾಜಕಾರಣ ಮಾಡಲು ಸಾಧ್ಯ. ಸಿದ್ದರಾಮಯ್ಯ ಅವರು ನಮ್ಮ ನಾಯಕರು. ಮಹಾಸ್ವಾಮಿಗಳೂ ಸೇರಿದಂತೆ ಕೆಲವರು ಮಾಧ್ಯಮಗಳಲ್ಲಿ ವಿಭಿನ್ನ ರೀತಿಯಲ್ಲಿ ಬಿಂಬಿಸುತ್ತಿದ್ದಾರೆ. ಈ ವಿಚಾರಗಳಿಗೆ ಸಂಬಂಧಿಸಿದಂತೆ ನಾವು ಅವರಿಗೆ ತಿಳಿಸಬೇಕಾದ ವಿಷಯಗಳನ್ನು ಈಗಾಗಲೇ ತಿಳಿಸಿದ್ದೇವೆ ಎಂದರು.
ಸಿದ್ದರಾಮಯ್ಯನವರು ನಮ್ಮ ನಾಯಕರು. ಸ್ಥಳೀಯ ಸಂಸ್ಥೆಗಳ ಚುನಾವಣೆ ಸಮೀಪಿಸುತ್ತಿದೆ. ಹೀಗಾಗಿ ಅವರ ಬಳಿ ಅನೇಕ ವಿಚಾರಗಳನ್ನ ಚರ್ಚೆ ಮಾಡಬೇಕಾದ್ದರಿಂದ ಅವರನ್ನು ಭೇಟಿ ಮಾಡಿ ಹಬ್ಬದ ಶುಭಾಶಯ ಕೋರಿದ್ದೇನೆ ಎಂದು ತಿಳಿಸಿದರು










